- ಶೌಚಾಲಯಕ್ಕೆ ಹೋಗಿ ಬಂದ ನಂತರ
- ಮಗುವಿನ ಡೈಪರ್ ಬದಲಾಯಿಸಿದ ನಂತರ ಮತ್ತು ಶೌಚಾಲಯಕ್ಕೆ ಹೋಗಲು ಮಗುವಿಗೆ ಸಹಾಯಮಾಡಿದ ನಂತರ
- ಗಾಯಕ್ಕೆ ಔಷಧಿ ಹಚ್ಚುವ ಮುಂಚೆ ಮತ್ತು ನಂತರ
- ಕಾಯಿಲೆ ಬಿದ್ದವರನ್ನು ಭೇಟಿಯಾಗುವ ಮುಂಚೆ ಮತ್ತು ನಂತರ
- ಆಹಾರವನ್ನು ತಯಾರಿಸುವ, ಬಡಿಸುವ ಮತ್ತು ತಿನ್ನುವ ಮುಂಚೆ
- ಕೆಮ್ಮಿದ, ಸೀನಿದ ಮತ್ತು ಮೂಗನ್ನು ಒರೆಸಿಕೊಂಡ ನಂತರ
- ಪ್ರಾಣಿಯನ್ನು ಅಥವಾ ಪ್ರಾಣಿಯ ತ್ಯಾಜ್ಯವನ್ನು ಮುಟ್ಟಿದ ನಂತರ
- ಕಸ ಎಸೆದ ನಂತರ
- ಕೈ ತೊಳೆಯುವುದನ್ನು ಎಂದೂ ಹಗುರವಾಗಿ ಪರಿಗಣಿಸಬಾರದು. ಸಾರ್ವಜನಿಕ ಶೌಚಾಲಯವನ್ನು ಉಪಯೋಗಿಸುವ ಎಷ್ಟೋ ಜನ ತಮ್ಮ ಕೈ ತೊಳೆದುಕೊಳ್ಳುವುದೇ ಇಲ್ಲ ಅಥವಾ ಸರಿಯಾಗಿ ತೊಳೆದುಕೊಳ್ಳುವುದಿಲ್ಲ ಎಂದು ಅಧ್ಯಯನಗಳು ತೋರಿಸಿವೆ. ಹಾಗಾದರೆ ನಮ್ಮ ಕೈಯನ್ನು ಹೇಗೆ ತೊಳೆಯಬೇಕು?
ಹೇಗೆ ತೊಳೆದುಕೊಳ್ಳಬೇಕು
- ಶುದ್ಧ ನೀರಿನಲ್ಲಿ ಕೈಯನ್ನು ಒದ್ದೆ ಮಾಡಿಕೊಂಡು ಸೋಪು ಹಚ್ಚಿರಿ. ನೊರೆ ಬರುವವರೆಗೆ ಕೈಯನ್ನು ಚೆನ್ನಾಗಿ ಉಜ್ಜಿರಿ. ಉಗುರುಗಳನ್ನು, ಹೆಬ್ಬೆರಳುಗಳನ್ನು, ಕೈ ಹಿಂಭಾಗವನ್ನು ಮತ್ತು ಬೆರಳುಗಳ ಮಧ್ಯ ಭಾಗವನ್ನೂ ಶುಚಿ ಮಾಡಿಕೊಳ್ಳಿ.
- ಕನಿಷ್ಠ 20 ಸೆಕೆಂಡುಗಳವರೆಗೆ ನಿಮ್ಮ ಕೈಗಳನ್ನು ಉಜ್ಜುತ್ತಾ ಇರಿ.
- ನಂತರ ಶುದ್ಧವಾದ ನೀರಿನಲ್ಲಿ ಚೆನ್ನಾಗಿ ಕೈ ತೊಳೆದುಕೊಳ್ಳಿ.
- ಕೈಯನ್ನು ಶುದ್ಧವಾದ ಬಟ್ಟೆಯಿಂದ ಅಥವಾ ಟಿಶ್ಯೂ ಪೇಪರ್‍ನಿಂದ ಒರೆಸಿಕೊಳ್ಳಿ.
ಈ ಮೇಲಿನ ಹೆಜ್ಜೆಗಳು ಸರಳವಾದರೂ ಅವುಗಳನ್ನು ಪಾಲಿಸುವುದಾದರೆ ಕಾಯಿಲೆಗಳಿಂದ ದೂರವಿದ್ದು ನಮ್ಮ ಪ್ರಾಣವನ್ನು ಕಾಪಾಡಿಕೊಳ್ಳುತ್ತೇವೆ.